KANNADA

ಗದೈ ಭಾಗ 01 ನಮ್ಮ ಭಾಷೆ








ಬಾಲ್ಯ

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ ೨೯, ೧೯೦೪ ರಲ್ಲಿ ಜನಿಸಿದರು.[] ತಂದೆ ವೆಂಕಟಪ್ಪ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.

ಶಿಕ್ಷಣ

ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು.[] ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ. ಎ. ಪದವಿಯನ್ನೂ ಪಡೆದರು. ಟಿ. ಎಸ್. ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ವೃತ್ತಿಜೀವನ

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ಪ್ರಾಂಶುಪಾಲರೂ ಆಗಿದ್ದರು. ನಂತರ ಉಪಕುಲಪತಿಗಳಾದರು[]. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.

ವೈವಾಹಿಕ ಜೀವನ

'ಉದಯರವಿ', ಒಂಟಿಕೊಪ್ಪಲ್, ಮೈಸೂರು

ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.

ನಿಧನ

ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ ಕೃಷಿ

ಕುವೆಂಪು ಅವರು 20ನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ 'ಶ್ರೀ ರಾಮಾಯಣ ದರ್ಶನಂ'ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ 'ಕಾನೂರು ಹೆಗ್ಗಡತಿ' ಹಾಗೂ 'ಮಲೆಗಳಲ್ಲಿ ಮದುಮಗಳು' ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ.[]

No comments:

Post a Comment